Job Description: * ಸರ್ ಸಿ ವಿ ರಾಮನ್ ರ "ರಾಮನ್ ಪರಿಣಾಮ" ಆವಿಷ್ಕಾರದ ಸ್ಮರಣಾರ್ಥವಾಗಿ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. * ಫೆಬ್ರವರಿ 28 ರಂದೇ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಣೆ ಮಾಡಬೇಕು ಎಂದು 1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ (NCSTC) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. * ಎನ್‌ಸಿಎಸ್‌ಟಿಸಿಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಿಸಿತು. ನಂತರ ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು 1987 ಫೆಬ್ರವರಿ 28 ರಂದು ಆಚರಣೆ ಮಾಡಲಾಯಿತು.* ವಿಜ್ಞಾನ ದಿನಾಚರಣೆಯ ಮುಖ್ಯ ಉದ್ದೇಶಗಳು - ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಅರಿವು ಮೂಡಿಸುವುದು. - ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸುವುದು. - ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವುದು. - ಪ್ರಯೋಗಗಳ ಮೂಲಕ ಹೊಸ ಆವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಹುರಿದುಂಬಿಸುವುದು. - ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಸಕ್ತ ಬೆಳವಣಿಗೆ ಮತ್ತು ಅಭಿವೃದ್ಧಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು. - ವಿಜ್ಞಾನ, ತಂತ್ರಜ್ಞಾನ, ಗಣಿತ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪ್ರಯೋಗಗಳ ಮೂಲಕ ನಾವೀನ್ಯತೆಯನ್ನು ಮೂಡಿಸಲು ಪ್ರೇರೆಪಿಸುವುದು.