* ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 16ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು,ಹಾಗೂ ಫೆ.12ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರುವರಿ 23ರವರೆಗೆ ಅಧಿವೇಶನದ ನಡಾವಳಿಗಳು ಜರುಗಲಿವೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದರು.* ಫೆಬ್ರುವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಫೆಬ್ರುವರಿ19 ರಿಂದ ಬಜೆಟ್ ಮೇಲೆ ಚರ್ಚೆಗಳು ನಡೆಯಲಿವೆ.* ಕರ್ನಾಟಕ ವಿದ್ಯುತ್ ನಿಗಮವು 2022-23ನೆ ಸಾಲಿನಲಿ 1630 ಕೋಟಿ ರೂ.ಮತ್ತು 2023-24ನೆ ಸಾಲಿನಲ್ಲಿ 2800 ಕೋಟಿ ರೂ.ಗಳು ಸೇರಿ ಒಟ್ಟು 4,430.00 ಕೋಟಿ ರೂ.ಗಳನ್ನು ಬ್ಯಾಂಕ್‍ಗಳು, ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲಕ್ಕೆ ಸರಕಾರದ ಖಾತರಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.* ಗೃಹಜ್ಯೋತಿ ಯೋಜನೆ ಅಡಿಯಲ್ಲಿ 48 ಯೂನಿಟ್‌ಗಳಿಗಿಂತ ಕಡಿಮೆ ಬಳಸುವ ಗ್ರಾಹಕರಿಗೆ ಶೇ.10ರಷ್ಟು ಬದಲಿಗೆ ಹೆಚ್ಚುವರಿ 10 ಅರ್ಹತಾ ಯೂನಿಟ್‌ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.* ಬೆಸ್ಕಾಂ ವ್ಯಾಪ್ತಿಯಲ್ಲಿ 69.73 ಲಕ್ಷ ಕುಟುಂಬಗಳು 48 ಯೂನಿಟ್‍ಗಿಂತ ಕಡಿಮೆ ಬಳಕೆ ಮಾಡುತ್ತಿದ್ದಾರೆ. 10 ಯೂನಿಟ್‍ಗಳ ಹೆಚ್ಚಳದಿಂದ ಸರಕಾರಕ್ಕೆ 33 ಕೋಟಿ ರೂ.ಗಳ ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದರು.