* ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಫೆಬ್ರವರಿ 2025 ತಿಂಗಳ ಆಟಗಾರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಿದ್ದು. ಪುರುಷರ ವಿಭಾಗದಲ್ಲಿ ಭಾರತದ ಶುಭಮನ್ ಗಿಲ್ ಮತ್ತು ಮಹಿಳಾ ವಿಭಾಗದಲ್ಲಿ ಆಸ್ಟ್ರೇಲಿಯಾದ ಅಲಾನಾ ಕಿಂಗ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ..* ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 25 ವರ್ಷದ ಗಿಲ್ ಅದ್ಭುತ ಶತಕ ಗಳಿಸಿದರೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 46 ರನ್ ಗಳಿಸಿದರು. ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದರು. ಅವರ ಪ್ರದರ್ಶನಕ್ಕೆ ಅಂತಿಮವಾಗಿ ಗಿಲ್ ಅವರನ್ನು ಫೆಬ್ರವರಿ ತಿಂಗಳ ಐಸಿಸಿ ತಿಂಗಳ ಆಟಗಾರ ಎಂದು ಹೆಸರಿಸಲಾಯಿತು.* ಫೆಬ್ರವರಿಯಲ್ಲಿ 406 ರನ್ ಗಳಿಸಿದರು, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಶತಕಗಳನ್ನು ಬಾರಿಸಿ ಪ್ರಮುಖ ಪಾತ್ರವಹಿಸಿದರು.* ಶುಭಮನ್ ಗಿಲ್, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮತ್ತು ಬಾಂಗ್ಲಾದೇಶ ವಿರುದ್ಧ ದುಬೈನಲ್ಲಿ ಶತಕ ಬಾರಿಸಿದ ಬಳಿಕ, ಐಸಿಸಿ ಪುರುಷರ ತಿಂಗಳ ಆಟಗಾರ್ತಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.* ಶುಭಮನ್ ಗಿಲ್ ಅವರ ಮೂರನೇ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯಾಗಿದ್ದು, ಈ ಹಿಂದೆ 2023ರ ಜನವರಿ ಹಾಗೂ ಸೆಪ್ಟೆಂಬರ್‌ನಲ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದರು.* ಆಸ್ಟ್ರೇಲಿಯಾದ ಅಲಾನಾ ಕಿಂಗ್ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಈ ಪ್ರಶಸ್ತಿಗೆ ಭಾಜನರಾಗಿದ್ದರೆ.