* 2024 ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಟ್ಟಿಯಲ್ಲಿ 28ನೇ ಸ್ಥಾನದಲ್ಲಿದ್ದಾರೆ.* ಸೀತಾರಾಮನ್ ಭಾರತದ ಹಣಕಾಸು ಖಾತೆಯನ್ನು ನಿರ್ವಹಿಸಿದ ಮೊದಲ ಮಹಿಳೆಯಾಗಿದ್ದಾರೆ. ಎಚ್ಸಿಎಲ್ ಕಾರ್ಪೋರೇಶನ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಶನಿ ನಾಡರ್ ಮಲ್ಹೋತ್ರಾ 81 ನೇ ಸ್ಥಾನದಲ್ಲಿದ್ದಾರೆ. * ರೋಶ್ನಿ ನಾಡರ್ ಮಲ್ಹೋತ್ರಾ ಅವರು ಭಾರತದ ಪ್ರಮುಖ IT ಸೇವಾ ಸಂಸ್ಥೆಗಳಲ್ಲಿ ಒಂದಾದ HCL ಟೆಕ್ನಾಲಜೀಸ್ನ ಅಧ್ಯಕ್ಷರಾಗಿದ್ದಾರೆ ಮತ್ತು HCL ಕಾರ್ಪೊರೇಶನ್ನ CEO ಆಗಿದ್ದಾರೆ.* ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್- ಶಾ 82ನೇ ಸ್ಥಾನದಲ್ಲಿದ್ದಾರೆ. ಅವರು 1978 ರಲ್ಲಿ ಸ್ಥಾಪಿಸಿದ ಬಯೋಕಾನ್ ಬಯೋಫಾರ್ಮಾಸ್ಯುಟಿಕಲ್ ಕಂಪನಿಯ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ.* ಐರೋಪ್ಯ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ಡೇರ್, ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಗಾರ್ಡೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಪಟ್ಟಿಯ ಮೊದಲ 3 ಸ್ಥಾನಗಳನ್ನು ಕ್ರಮವಾಗಿ ಪಡೆದಿದ್ದಾರೆ.