* 2002 ರಲ್ಲಿ ಪ್ರಾರಂಭವಾದಾಗಿನಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 7,72,000 ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಸರ್ಕಾರ ಮಂಗಳವಾರ (ಫೆ.10) ಹೇಳಿದೆ.* ಪ್ರಶ್ನೆಗಳಿಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ ಕಮಲೇಶ್ ಪಾಸ್ವಾನ್ ಈ ಯೋಜನೆಯ ಕಾರಣದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ 1ಲಕ್ಷ 63 ಸಾವಿರ ಜನವಸತಿಗಳಿಗೆ ರಸ್ತೆ ಸಂಪರ್ಕ ವಿಸ್ತರಿಸಿದೆ ಎಂದು ಹೇಳಿದರು.* ಈ ಯೋಜನೆಯ 4 ನೇ ಹಂತವು ದೇಶಾದ್ಯಂತ 25 ಸಾವಿರಕ್ಕೂ ಹೆಚ್ಚು ಜನವಸತಿಗಳಿಗೆ ರಸ್ತೆ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ.* ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ರಸ್ತೆ ಸಂಪರ್ಕವಿಲ್ಲದ ಅನೇಕ ಸ್ಥಳಗಳಿರುವುದರಿಂದ ಈ ಹಂತವು ಅಗತ್ಯವಾಗಿದೆ ಎಂದು ಅವರು ಹೇಳಿದರು.