* ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2025ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.* ಈ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯು ₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. * ವೈ.ಕೆ. ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಇದೇ 22ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.* ‘ಅದ್ಭುತ ಗಾಯನದ ಮೂಲಕ ವೆಂಕಟೇಶ್ ಕುಮಾರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.* ಈ ಕುರಿತು ಮಾತನಾಡಿದ ಎಂ.ವೆಂಕಟೇಶ್ ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ ಎಂದರು.