* ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಫೆಬ್ರುವರಿ 03 ರಂದು (ಶನಿವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.* "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಿ" ಎಂದು ಪುರೋಹಿತ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.* ಮೂರೂ ಬಾರಿ ಸಂಸದರಾಗಿದ್ದ ಬನ್ವಾರಿಲಾಲ್ ಪುರೋಹಿತ್ ಅವರು 2016 ರಲ್ಲಿ ತಮಿಳುನಾಡಿನ ರಾಜ್ಯಪಾಲರಾಗಿ ಹಾಗೂ  2016 ರಲ್ಲಿ ಅಸ್ಸಾಂನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.* ಬನ್ವಾರಿಲಾಲ್ ಪುರೋಹಿತ್ ಅವರು ಮೂರೂ ಬಾರಿ ಲೋಕಸಭಾ ಸಂಸದರಾಗಿದ್ದರು ಮತ್ತು ಮದ್ಯ ಭಾರತದ ಅತ್ಯಂತ ಹಳೆಯ ಇಂಗ್ಲಿಷ್  ದಿನಪತ್ರಿಕೆ 'ದಿ ಹಿತವಾದ್' ನ ವ್ಯವಸ್ಥಾಪಕ ಸಂಪಾದಕರಾಗಿದ್ದಾರೆ.