* ಪ್ರಧಾನಿ ನರೇಂದ್ರ ಮೋದಿ ಅವರು ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. * ಯಾವುದೇ ಸಮಸ್ಯೆಗೆ ಯುದ್ಧರಂಗದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂಬುದು ಭಾರತದ ಬಲವಾದ ನಂಬಿಕೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಪುನರ್‌ಸ್ಥಾಪನೆಗೆ ಸಾಧ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲು ಭಾರತ ಸಿದ್ಧವಿದೆ ಎಂದು ಹೇಳಿದ್ದಾರೆ.* ಪೋಲೆಂಡ್ ಹಾಗೂ ಉಕ್ರೇನ್ ಪ್ರವಾಸಕ್ಕೆ ತೆರಳಿರುವ ಮೋದಿ ಅವರು ಪೋಲೆಂಡ್‌ನಿಂದ ಉಕ್ರೇನ್ ರಾಜಧಾನಿ ಕೀವ್‌ಗೆ ರೈಲಿನ ಮೂಲಕ ತೆರಳಿದ್ದಾರೆ. ಉಕ್ರೇನ್‌ಗೆ ಭೇಟಿ ನೀಡುವಂತೆ ಮೋದಿ ಅವರಿಗೆ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಆಹ್ವಾನ ನೀಡಿದ್ದರು.* ಭಾರತದಲ್ಲಿಯೇ ತಯಾರಿಸಿ ಉಪಕ್ರಮಕ್ಕೆ ಕೈಜೋಡಿಸುವಂತೆ ಮೋದಿ ಅವರು ಪೋಲೆಂಡ್ ಕಂಪನಿಗಳನ್ನು ಆಹ್ವಾನಿಸಿದರು.* ಪೋಲೆಂಡ್ ಅಧ್ಯಕ್ಷ ಆಂಡ್ರೆ ಸೆಬಾಸ್ಟಿಯನ್ ಡೂಡಾ ಅವರ ಜೊತೆಗೂ ಪ್ರಧಾನಿ ಮೋದಿ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು.