* ಭಾರತೀಯ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಫೆಬ್ರವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು.* "ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ" ಎಂದು ಕೇಂದ್ರ ಸರ್ಕಾರದ ಸುತ್ತೋಲೆ ತಿಳಿಸಿದೆ.* ಅವರ ನೇಮಕಾತಿಯು ಪ್ರಧಾನ ಮಂತ್ರಿಯವರ ಅವಧಿಯೊಂದಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಇರುತ್ತದೆ. ಈವರೆಗೆ ಈ ಹುದ್ದೆ ನಿರ್ವಹಿಸುತ್ತಿದ್ದ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿ ಡಾ. ಪಿ.ಕೆ. ಮಿಶ್ರಾ ಅವರ ನಿವೃತ್ತಿಯಾದ ಜಾಗಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ನೇಮಿಸಲಾಗಿದೆ.* ಶಕ್ತಿಕಾಂತ್ ದಾಸ್ ಅವರು ಡಿಸೆಂಬರ್ 2018 ರಿಂದ ಡಿಸೆಂಬರ್ 2024 ರವರೆಗೆ ಆರು ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಡಿಸೆಂಬರ್ 10 ರಂದು ನಿವೃತ್ತರಾಗಿದ್ದರು. ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು.