* ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ (ಜುಲೈ 02) ಘಾನಾ ದೇಶದ ರಾಷ್ಟ್ರೀಯ ಪ್ರಶಸ್ತಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರದಾನ ಮಾಡಿ ಗೌರವಿಸಲಾಗಿದೆ. ಅವರ ‘ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ’ಕ್ಕಾಗಿ ಈ ಗೌರವ ನೀಡಲಾಗಿದೆ ಎಂದು ಘಾನಾ ಪ್ರಕಟಣೆಯಲ್ಲಿ ತಿಳಿಸಿದೆ.* ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರು ಮೋದಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. "140 ಕೋಟಿ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ" ಎಂದು ಭಾರತದ ಪ್ರಧಾನಿ ಮೋದಿಯವರು ಹೇಳಿದ್ದಾರೆ. * ಭಾರತದ ಪ್ರಧಾನಿ ಈ ಪ್ರಶಸ್ತಿಯನ್ನು ಭಾರತದ ಯುವಜನರಿಗೆ, ಅದರ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಗೆ ಮತ್ತು ಎರಡು ರಾಷ್ಟ್ರಗಳ ನಡುವಿನ ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅರ್ಪಿಸಿದರು. ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ಪ್ರಶಸ್ತಿಗೆ ಭಾಜನರಾಗಿದ್ದು, ಗೌರವದ ವಿಷಯ’ಎಂದು ಪ್ರಧಾನಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.* ಮೂರು ದಶಕಗಳಲ್ಲಿ ಭಾರತದಿಂದ ಘಾನಾಗೆ ಪ್ರಧಾನಿಯೊಬ್ಬರು ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.* ಭಾರತದ ಪ್ರಧಾನಿ ಮೋದಿ ಮತ್ತು ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಇಬ್ಬರೂ ನಾಯಕರು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಶಿಕ್ಷಣ ಮತ್ತು ಯುವಜನ ಅಭಿವೃದ್ಧಿ, ಕೃಷಿ ಮತ್ತು ಆಹಾರ ಭದ್ರತೆ, ಆರೋಗ್ಯ ರಕ್ಷಣೆ, ಡಿಜಿಟಲ್ ಮತ್ತು ಹಣಕಾಸು ಏಕೀಕರಣ ಮತ್ತು ವ್ಯಾಪಾರ ಸಂಬಂಧಗಳು ಒಪಂದಗಳನ್ನು ಮಾಡಿಕೊಂಡಿದ್ದಾರೆ.