* ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಸರಕಾರದ ಅತ್ಯುನ್ನತ ನಾಗರಿಕ ಪುರಸ್ಕಾರ ಎನಿಸಿದ 'ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದಿ ಅಪೋಸ್ಟೆಲ್‌' ನೀಡಿ ಗೌರವಿಸಲಾಗಿದೆ. ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಮತ್ತು ವ್ಯೂಹಾತ್ಮಕ ಪಾಲುದಾರಿಕೆಯನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಮೋದಿ ಅವರ ಅಸಾಮಾನ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ರಷ್ಯಾ ರಾಯಭಾರ ಕಚೇರಿ ತಿಳಿಸಿದೆ.* ಮಾಸ್ಕೋದ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ 2019ನೇ ಸಾಲಿನ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ದಿ ಫಸ್ಟ್-ಕಾಲ್ಡ್ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಧಾನ ಮಾಡಲಾಯಿತು. * ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ನಾಯಕ ಪ್ರಧಾನಿ ಮೋದಿ.  * 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ' ಇದು ಮೋದಿ ಅವರಿಗೆ ಸಂದಿರುವ ಏಳನೇ ವಿದೇಶಿ ಪುರಸ್ಕಾರವಾಗಿದೆ.* ಜೀಸಸ್ನ ಮೊದಲ ಧರ್ಮಪ್ರಚಾರಕ ಮತ್ತು ರಷ್ಯಾದ ಪೋಷಕ ಸಂತರಾದ ಸೇಂಟ್ ಆಂಡ್ರ್ಯೂ ಅವರ ಗೌರವಾರ್ಥವಾಗಿ 1698 ರಲ್ಲಿ ತ್ಸಾರ್ ಪೀಟರ್ ದಿ ಗ್ರೇಟ್ ಸ್ಥಾಪಿಸಿದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ದಿ ಫಸ್ಟ್-ಕಾಲ್ಡ್ ಅನ್ನು ಅತ್ಯಂತ ವಿಶಿಷ್ಟ ನಾಗರಿಕ ಅಥವಾ ಮಿಲಿಟರಿ ಅರ್ಹತೆಗಾಗಿ ನೀಡಲಾಗುತ್ತದೆ.* "ನನಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾನು ಅದನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ" ಎಂದು ಪ್ರಧಾನಿ ಮೋದಿ ಇಂದು ಮಾಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ನಂತರ X ನಲ್ಲಿ ಪೋಸ್ಟ್ ಮಾಡಿದ್ದಾರೆ.