Job Description: * ಪ್ರಧಾನಿ ನರೇಂದ್ರ ಮೋದಿಯವರು ಮೇ 28 ರಂದು ಸಂಸತ್ ಭವನವನ್ನು ಉದ್ಘಾಟಿಸಿದರು. * ಪ್ರಧಾನಿ ನರೇಂದ್ರ ಮೋದಿಯವರಿಂದ ನೂತನ ಸಂಸತ್ ಭವನ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾಗತಿಸಿದ್ದಾರೆ. ಇದು ಇಡೀ ದೇಶಕ್ಕೆ ಹೆಮ್ಮೆಯ ಮತ್ತು ಅತ್ಯಂತ ಸಂತಸದ ವಿಷಯ ಎಂದು ಅವರು ತಿಳಿದ್ದಾರೆ. * ನೂತನ ಸಂಸತ್ ಭವನ ಉದ್ಘಾಟನೆಯ ಸವಿ ನೆನಪಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 75 ರೂ. ಮುಖ ಬೆಲೆಯ ನಾಣ್ಯ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.* ರಾಷ್ಟ್ರಪತಿಯವರೇ ನೂತನ ಸಂಸತ್ತಿನ ಮುಖ್ಯಸ್ಥರು. ಹಾಗಾಗಿ, ಅವರೇ ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಒತ್ತಾಯಿಸಿದ್ದ ಹಲವು ವಿಪಕ್ಷಗಳು, ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು.