* ಜೂನ್ 5 ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು 'ಏಕ್ ಪೆಡ್ ಮಾ ಕೆ ನಾಮ್'(ಅಮ್ಮನ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನವನ್ನು ಪರಿಚಯಿಸಿದರು.* ದೆಹಲಿಯ ಬುದ್ಧ ಜಯಂತಿ ಪಾರ್ಕ್‌ನಲ್ಲಿ ಪೀಪಲ್ ಮರದ ಸಸಿ ನೆಟ್ಟರು. ಅವರೊಂದಿಗೆ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಇದ್ದರು.* 1972ರಲ್ಲಿ ಜೂನ್‌ 5 ರಂದು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ಮಾನವ ಪರಿಸರ ಸಂಬಂಧದ ಕುರಿತು ವಿಶ್ವಸಂಸ್ಥೆಯು ಸಮ್ಮೇಳನವೊಂದನ್ನು ನಡೆಸಿತ್ತು.* ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.* ‘ಏಕ್ ಪೆಡ್ ಮಾ ಕೆ ನಾಮ್’ ಎಂಬ ಅಭಿಯಾನವನ್ನು ಭಾರತದಾದ್ಯಂತ ಲಕ್ಷಾಂತರ ಮರಗಳನ್ನು ನೆಡುವ ಗುರಿಯನ್ನು ಹೊಂದಿದೆ.