* ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆಗೆ, ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17 ರಂದು ಚಾಲನೆ ನೀಡಿದ್ದಾರೆ.* ಕೇಂದ್ರ ಸರ್ಕಾರವು ವಿಶ್ವಕರ್ಮ ಜಯಂತಿ ದಿನದಂದೇ 13 ಸಾವಿರ ಕೋಟಿ ಮೊತ್ತದ 'ಪಿಎಂ ವಿಶ್ವಕರ್ಮ' ಯೋಜನೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿದೆ.* ಗ್ರಾಮೀಣ ಹಾಗೂ ನಗರ ಪ್ರದೇಶದ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಹಾಗೂ ಬ್ಯಾಂಕ್‌ ಖಾತರಿ ರಹಿತ ಸಾಲ ಸೌಲಭ್ಯ ದೊರೆಯಲಿದೆ.* ಐದು ವರ್ಷಗಳಲ್ಲಿ ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳನ್ನು 30 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿ ಕುಟುಂಬಗಳಿಗೆ ತಲುಪುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.* ಕೇಂದ್ರ ಸರ್ಕಾರವೇ ಸಂಪೂರ್ಣವಾಗಿ ಯೋಜನೆಯ ಅನುದಾನವನ್ನು ಭರಿಸಲಿದ್ದು, ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 30 ಲಕ್ಷ ಕುಟುಂಬಗಳಿಗೆ ಇದರ ಪ್ರಯೋಜನ ಸಿಗಲಿದೆ.