* ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಗಸ್ಟ್ 1ರಂದು 'ಲೋಕಮಾನ್ಯ ತಿಲಕ' ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಜುಲೈ 10 ರಂದು (ಸೋಮವಾರ) ತಿಳಿಸಿದೆ.* ಲೋಕಮಾನ್ಯ ತಿಲಕ್ ಅವರ 103ನೇ ಪುಣ್ಯತಿಥಿಯಂದು  'ಲೋಕಮಾನ್ಯ ತಿಲಕ್' ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದೀಪಕ್‌ ತಿಲಕ್‌ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.* ಮೋದಿ ಅವರ ಸರ್ವೋಚ್ಚ ನಾಯಕತ್ವ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ದೇಶವು ಅಭಿವೃದ್ಧಿಯ ಮೆಟ್ಟಿಲುಗಳನ್ನು ಏರುತ್ತಿದೆ ಎಂದಿದ್ದಾರೆ.* ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಎನ್‌ಸಿಪಿ ಮುಖ್ಯಸ್ಥರಾದ ಶರದ್ ಪವಾ‌ರ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್ ಮತ್ತು ಅಜಿತ್ ಪವಾ‌ರ ಅವರನ್ನೂ ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ.