* ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. * ಭಾರತ ಮತ್ತು ಬ್ರೆಜಿಲ್ ನಡುವಿನ ಬೆಳೆಯುತ್ತಿರುವ ರಾಜತಾಂತ್ರಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳಿಗೆ ಗೌರವದ ಸಂಕೇತವಾಗಿ ಈ ಮನ್ನಣೆಯನ್ನು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಈ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದ್ದಾರೆ.* 'ಬ್ರೆಜಿಲ್ನ ಅಧ್ಯಕ್ಷರು ದೇಶದ ಅತ್ಯನ್ನತ್ತ ಪ್ರಶಸ್ತಿ ನೀಡಿ ಗೌರವಿಸಿರುವುದು ನನಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಸಂದ ಗೌರವ ಹಾಗೂ ಹೆಮ್ಮೆಯ ಕ್ಷಣವಾಗಿದೆ' ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.* ಈ ಪ್ರಶಸ್ತಿಯನ್ನು ಸೇರಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವಿಧ ದೇಶಗಳು ನೀಡಿದ ಒಟ್ಟು ನಾಗರಿಕ ಪ್ರಶಸ್ತಿಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ,* ಪ್ರಧಾನಿ ಮೋದಿ ಅವರಿಗೆ ಈ ಗೌರವವನ್ನು ನೀಡುವ ಮೂಲಕ, ಭಾರತ-ಬ್ರೆಜಿಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಯತ್ನಗಳನ್ನು ಹಾಗೂ ಬ್ರಿಕ್ಸ್, ಜಿ20 ಮತ್ತು ವಿಶ್ವಸಂಸ್ಥೆಯಂತಹ ಅಂತರರಾಷ್ಟ್ರೀಯ ವೇದಿಕೆಗಳ ಮೂಲಕ ಸಹಕಾರವನ್ನು ಮುನ್ನಡೆಸುವಲ್ಲಿ ಅವರ ಪಾತ್ರವನ್ನು ಬ್ರೆಜಿಲ್ ಗುರುತಿಸಿದೆ.* ಭಾರತ ಮತ್ತು ಬ್ರೆಜಿಲ್ ಸಾರ್ವಭೌಮತ್ವಕ್ಕೆ ಗೌರವ, ಸುಸ್ಥಿರ ಅಭಿವೃದ್ಧಿ ಮತ್ತು ಬಹುಧ್ರುವೀಯ ವಿಶ್ವ ಕ್ರಮದಂತಹ ಸಾಮಾನ್ಯ ಮೌಲ್ಯಗಳನ್ನು ಹಂಚಿಕೊಳ್ಳುತ್ತವೆ. ವರ್ಷಗಳಲ್ಲಿ, ಎರಡೂ ದೇಶಗಳು ಈ ಕೆಳಗಿನ ಕ್ಷೇತ್ರಗಳಲ್ಲಿ ಸಹಕರಿಸಿವೆ.