* ಪ್ರಧಾನಿ ನರೇಂದ್ರ ಮೋದಿಯವರಿಗೆ 'ಶಿವ ಸಮ್ಮಾನ್ʼ ಪ್ರಶಸ್ತಿ ಘೋಷಣೆ, ಈ ಪ್ರಶಸ್ತಿಯನ್ನು ಫೆಬ್ರುವರಿ 19 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.* ಶಿವಾಜಿ ಮಹಾರಾಜರ ಜನ್ಮದಿನದಂದು ಪ್ರಧಾನಿ ಮೋದಿ ಅವರು ಶಿವ ಸಮ್ಮಾನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ 13ನೇ ವಂಶಸ್ಥ ಹಾಗೂ ಹಾಲಿ ಬಿಜೆಪಿ ರಾಜ್ಯಸಭಾ ಸಂಸದ ಛತ್ರಪತಿ ಉದಯರಾಜೇ ಭೋಸಲೆ ಅವರು ಪ್ರಧಾನಿ ಮೋದಿ ಅವರಿಗೆ ಶಿವ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಿಸಿದ್ದಾರೆ.* ಮಹಾರಾಷ್ಟ್ರದ ಪ್ರತಿಷ್ಠಿತ ಶಿವ ಸಮ್ಮಾನ್ ಪ್ರಶಸ್ತಿ ಘೋಷಣೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಪ್ರಶಸ್ತಿಗೆ ಘೋಷಿಸಲಾಗಿದೆ. ರಾಜಕೀಯ ಹಾಗೂ ಸಾಮಾಜಿಕ ರಂಗದಲ್ಲಿ ಪ್ರಧಾನಿಯವರ ಕೊಡುಗೆ, ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.* ಈ ಪ್ರಶಸ್ತಿಯನ್ನು ಸತಾರಾ ರಾಜಮನೆತನ ವಂಶಸ್ಥರು ಮತ್ತು ಶಿವಭಕ್ತರು ಸ್ಥಾಪಿಸಿದ್ದಾರೆ. ಸೈನಿಕ್ ಸ್ಕೂಲ್ ಮೈದಾನದಲ್ಲಿ ಅದ್ಧೂರಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಇನ್ನು ಇದರ ನೇತತ್ವ ವಹಿಸಿರುವ ಉದಯರಾಜೆ ಪ್ರಸ್ತುತ ಬಿಜೆಪಿ ರಾಜ್ಯಸಭಾ ಸಂಸದರಾಗಿದ್ದಾರೆ.* ಮೋದಿಯವರಿಗೆ ಪ್ರಶಸ್ತಿ ನೀಡುತ್ತಿರುವುದಕ್ಕೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ ಶ್ರೇಷ್ಠ ಮತ್ತು ಆದರ್ಶ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿನಲ್ಲಿ ರಾಜಮನೆತನದವರು ನೀಡುವ `ಶಿವ ಸಮ್ಮಾನ್ ಪ್ರಶಸ್ತಿ’ಯನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾಗುವುದು. ಇದು ಎಲ್ಲಾ ಶಿವಭಕ್ತರಿಗೆ ಸಂತೋಷ ಮತ್ತು ಹೆಮ್ಮೆಯ ಕ್ಷಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಅವರು ತಮ್ಮ ಟ್ವಿಟರ್ ಪೊಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.