* ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂರ್ಯೋದಯ ಯೋಜನೆಯನ್ನ ಘೋಷಿಸಿದೆ. ಇದು ಒಂದು ಕೋಟಿ ಮನೆಗಳಲ್ಲಿ ಸೌರ ಫಲಕಗಳನ್ನ ಸ್ಥಾಪಿಸುವ ಉದ್ದೇಶ ಹೊಂದಿದೆ.* ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಸ್ಥ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಜನವರಿ 22 ರಂದು (ಸೋಮವಾರ) ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ.* ಇದು ಬಡವರು ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ.* ಸರ್ಕಾರವು 1 ಕೋಟಿ ಮನೆಗಳ ಮೇಲ್ಛಾವಣಿಯ ಮೇಲೆ ಸೋಲಾರ್ ಅಳವಡಿಸುವ ಗುರಿಯೊಂದಿಗೆ 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಪ್ರಾರಂಭಿಸುತ್ತದೆ.* ದೇಶಾದ್ಯಂತ ಮನೆಗಳ ಮೇಲೆ ಸೌರಫಲಕಗಳನ್ನು ಅಳವಡಿಸಿ 2022ರೊಳಗೆ 40 ಗಿಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನೂ ಹೊಂದಲಾಗಿತ್ತು. 2023ರ ಅಂತ್ಯಕ್ಕೆ ಈ ಯೋಜನೆಯಡಿ ಕೇವಲ 11 ಗಿಗಾ ವ್ಯಾಟ್ ನಷ್ಟು ವಿದ್ಯುತ್ ಉತ್ಪಾದನೆ ಮಾಡಲಾಗಿದೆ.* ಸೂರ್ಯೋದಯ ಯೋಜನೆ ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.