* ಉನ್ನತ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ(ನವೆಂಬರ್.06) ಅನುಮೋದನೆ ನೀಡಿದೆ.* ಪ್ರತಿ ವರ್ಷ ದೇಶದ ಅಗ್ರ 860 ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಿಗೆ ಅಂಗೀಕರಿಸಲ್ಪಟ್ಟ 22 ಲಕ್ಷಕ್ಕೂ ಹೆಚ್ಚು ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲವನ್ನು ಒದಗಿಸಲು ಕಾರ್ಯಕ್ರಮವು ಪ್ರಯತ್ನಿಸುತ್ತದೆ.* ವಿದ್ಯಾರ್ಥಿಗಳು ಮೇಲಾಧಾರ ಮತ್ತು ಜಾಮೀನುದಾರರಿಲ್ಲದ PM-ವಿದ್ಯಾಲಕ್ಷ್ಮಿ ಯೋಜನೆಯಡಿ ವಿಶೇಷ ಶಿಕ್ಷಣ ಸಾಲಗಳಿಗೆ ಅರ್ಜಿ ಸಲ್ಲಿಸಬಹುದು.* ವಿದ್ಯಾರ್ಥಿಗಳಿಗೆ ಸೌಕರ್ಯ ಮತ್ತು ಅನುಕೂಲಕ್ಕಾಗಿ ಸಂಪೂರ್ಣ ಡಿಜಿಟಲ್ ಪ್ಲಾಟ್‌ಫಾರ್ಮ್‌ನೊಂದಿಗೆ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಳ ಪ್ರವೇಶಿಸಬಹುದಾದ ಮತ್ತು ವಿದ್ಯಾರ್ಥಿ ಸ್ನೇಹಿಯಾಗಿ ಮಾಡಲಾಗಿದೆ.* ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿಯು 2020ರ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹೊರಹೊಮ್ಮುವ ಮತ್ತೊಂದು ಪ್ರಮುಖ ಉಪ ಕ್ರಮವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಸಾರ್ವಜನಿಕ ಮತ್ತು ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕ್ರಮಗಳ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ಲಭ್ಯವಾಗುವಂತೆ ಮಾಡಲು ಶಿಫಾರಸು ಮಾಡಿದೆ.* ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಯಡಿಯಲ್ಲಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ (QHEI) ಪ್ರವೇಶ ಪಡೆಯುವ ಯಾವುದೇ ವಿದ್ಯಾರ್ಥಿಯು ಯಾವುದೇ ಮೇಲಾಧಾರ ಅಥವಾ ಗ್ಯಾರಂಟಿ ಇಲ್ಲದೆ ಬ್ಯಾಂಕ್‌ ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ.* ರೂ. 7.5 ಲಕ್ಷದವರೆಗಿನ ಸಾಲದ ಮೊತ್ತಕ್ಕೆ, ವಿದ್ಯಾರ್ಥಿಯು ಬಾಕಿ ಉಳಿದಿರುವ ಡೀಫಾಲ್ಟ್‌ ನ ಶೇ.75 ರಷ್ಟು ಸಾಲ ಖಾತರಿಗೆ ಅರ್ಹರಾಗಿರುತ್ತಾರೆ.