* ಸೆಪ್ಟೆಂಬರ್ 15 ರಂದು ವಿಶ್ವಸಂಸ್ಥೆಯ ಘೋಷಿತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಬೀದರ್‌ನಿಂದ ಚಾಮರಾಜನಗರದವರೆಗೆ ವಿಶ್ವದ ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.* ಪ್ರಜಾಸತ್ತಾತ್ಮಕ ತತ್ವಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಕಡೆಗೆ ಕರ್ನಾಟಕದ ನಿರಂತರ ಬದ್ಧತೆಗೆ ಪ್ರದರ್ಶಿಸಲು ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಹೇಳಿದ್ದಾರೆ.* ಒಟ್ಟು 2500 ಕಿ.ಮೀ. ಉದ್ದ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, 25 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ಮೂಲಕ ದಾಖಲೆ ಎನಿಸಲಿದೆ. ಮತ್ತು ಕಾರ್ಯಕ್ರಮದ ಅಂಗವಾಗಿ 10 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ. * ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿ ನಿರ್ಮಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಸಂಪರ್ಕಿಸುವ, ಸುಮಾರು 2,500 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಇದು ವಿಶ್ವದಲ್ಲಿಯೇ ಅತಿ ಉದ್ದದ ಮಾನವ ಸರಪಳಿಯಾಗಲಿದೆ ಎಂದಿದ್ದಾರೆ.* ಪ್ರತಿ ಕಿಲೋಮೀಟರ್‌ಗೆ ಸರಾಸರಿ 1,000 ಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸುಮಾರು 25 ಲಕ್ಷ ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಾನವ ಸರಪಳಿಯಲ್ಲಿ ಭಾಗವಹಿಸುವವರು ಪ್ರಜಾಪ್ರಭುತ್ವದ ಅಡಿಯಲ್ಲಿರುವ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಪ್ರದರ್ಶಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.