* ಬಿ. ಎಂ. ಶ್ರೀ. ಪ್ರತಿಷ್ಠಾನ ನೀಡುವ ‘ಶ್ರೀಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಹಾಗೂ ಚಿಂತಕಿಯಾದ ಪ್ರೊ. ವೀಣಾ ಶಾಂತೇಶ್ವರ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಮತ್ತು ಅಭಿನಂದನಾ ಪತ್ರವನ್ನೊಳಗೊಂಡಿದೆ. * ಕಮಲಿನಿ ಶಾ. ಬಾಲುರಾವ್ ಅವರು ಸ್ಥಾಪಿಸಿರುವ ದತ್ತಿಯಿಂದ ಬಿ. ಎಂ. ಶ್ರೀ. ಪ್ರತಿಷ್ಠಾನ ಪ್ರತಿ ವರ್ಷ ಈ ‘ಶ್ರೀ ಸಾಹಿತ್ಯ’ ಪ್ರಶಸ್ತಿ ನೀಡುತ್ತಿದ್ದು, ನಾಡೋಜ ಡಾ. ಹಂಪ.ನಾಗರಾಜಯ್ಯ, ಲೇಖಕಿ ರೂಪ ಹಾಸನ, ಪ್ರೊ. ಸೋಮಣ್ಣ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಸರ್ವಾನುಮತದಿಂದ ವೀಣಾ ಶಾಂತೇಶ್ವರ ಅವರನ್ನು ಆಯ್ಕೆ ಮಾಡಿದೆ.* ವೀಣಾ ಶಾಂತೇಶ್ವರ ಅವರು ಸಣ್ಣಕತೆ, ಕಾದಂಬರಿಗಳ ಜೊತೆಗೆ ಹಲವಾರು ವಿಮರ್ಶಾತ್ಮಕ ಪ್ರಬಂಧ ಸಂಗ್ರಹಗಳನ್ನು ಪ್ರಕಟಿಸಿದ್ದಾರೆ. ಉತ್ತರ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದ ಇವರು ಅಖಿಲ ಭಾರತ ಲೇಖಕಿಯರ ಸಮ್ಮೇಳನದ ಸಂಯೋಜಕಿಯಾಗಿದ್ದರು.