* ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಕೆರೆಬೇಟೆ' ಸಿನಿಮಾ ಆಯ್ಕೆಯಾಗಿದೆ. ಗೋವಾ ಫೆಸ್ಟಿವಲ್ ಪನೋರಮಾ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಯಾಗಿದೆ. ಇದು ಕನ್ನಡ ಸಿನಿಮಾರಂಗಕ್ಕೆ ಹೆಮ್ಮೆಯ ವಿಚಾರವಾಗಿದೆ. * ಗೋವಾದಲ್ಲಿ ನಡೆಯುವ 55ನೇ 'ಭಾರತದ ಅಂತಾರಾಷ್ಟ್ರೀಯಾ ಚನಲಚಿತ್ರೋತ್ಸವ' ನವೆಂಬರ್ 20ರಿಂದ 28ರ ವರೆಗೆ ನಡೆಯಲಿದೆ. 'ಇಂಡಿಯನ್ ಪನೋರಮಾ'ದಲ್ಲಿ ಸುಮಾರು 25 ಫೀಚರ್ ಫಿಲ್ಮ್ ಪ್ರದರ್ಶನ ಕಾಣಲಿವೆ. ಅದರಲ್ಲಿ ಎರಡು ಕನ್ನಡ ಸಿನಿಮಾಗಳು ಸೇರಿವೆ. ಒಂದು ಸಾಗರ್ ಪುರಾಣಿಕ್ ನಿರ್ದೇಶನದ 'ವೆಂಕ್ಯ'. ಇನ್ನೊಂದು ಗುರುರಾಜ್ ನಿರ್ದೇಶನದ 'ಕೆರೆಬೇಟೆ'.* 25 ಫೀಚರ್ ಫಿಲ್ಮ್ ಮತ್ತು 20 ನಾನ್-ಫೀಚರ್ ಫಿಲ್ಮ್‌ಗಳನ್ನು ಆಯ್ಕೆ ಮಾಡಲಾಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ 'ಸ್ವಾತಂತ್ರ್ಯ ವೀರ್ ಸಾವರ್ಕರ್' ಹಿಂದಿ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಇನ್ನು 2ನೇ ಸಿನಿಮಾವಾಗಿ ಕನ್ನಡದ ಕೆರೆಬೇಟೆ ಚಿತ್ರವನ್ನು ಆಯ್ಕೆ ಮಾಡಲಾಗಿದೆ. * ಒಟ್ಟು 384 ಫೀಚರ್ ಫಿಲ್ಮ್ ವಿಭಾಗದಲ್ಲಿ 25 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. 262 ನಾನ್-ಫೀಚರ್ ಫಿಲ್ಮ್ ವಿಭಾಗದಲ್ಲಿ 20 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. * 384 ಸಿನಿಮಾಗಳಲ್ಲಿ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಯಾಗಿರುವುದು ಸಂತಸದ ವಿಚಾರವಾಗಿದೆ. ಕೆರೆಬೇಟೆ ರಾಜ್‌ಗುರು ನಿರ್ದೇಶನದಲ್ಲಿ ಮೂಡಿಬಂದಿರುವ ಚೊಚ್ಚಲ ಸಿನಿಮಾ. ಗೌರಿ ಶಂಕರ್ ನಾಯಕನಾಗಿ ಈ ಸಿನಿಮಾದಲ್ಲಿ ಮಿಂಚಿದ್ದಾರೆ. * ಕೆರೆಬೇಟೆ ಸಿನಿಮಾ ಅಪ್ಪಟ ಹಳ್ಳಿ ಸೊಗಡಿನ ಚಿತ್ರ. ಈ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯದ್ಯಂತ ಅದ್ದೂರಿಯಾಗಿ ರಿಲೀಸ್ ಆಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಮಲೆನಾಡಿನ ಮೀನು ಬೇಟೆ ಸಂಸ್ಕೃತಿಯನ್ನು ಪರಿಚಯಿಸಿತ್ತು. ಸಿನಿಮಾದಲ್ಲಿ ನಾಯಕ ಗೌರಿಶಂಕರ್, ನಾಯಕಿ ಬಿಂದು ಗೌಡ ಜೊತೆಗೆ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಹರಿಣಿ ಸೇರಿದಂತೆ ಅನೇಕ ದೊಡ್ಡ ಕಲಾವಿದರು ಬಣ್ಣ ಹಚ್ಚಿದ್ದಾರೆ.