* ರಾಜ್ಯದ ಎಲ್ಲ ಸರ್ಕಾರೀ ನೌಕರಿಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ  1ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ  ಸೂಚನೆ ನೀಡಿದೆ.* ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗಗಳಲ್ಲಿ ಸಮಾನ ಅವಕಾಶ ಎನ್ನುವ ನೀತಿಯನ್ನು ರಾಜ್ಯ ಸರ್ಕಾರವು ಅಳವಡಿಸಿಕೊಂಡಿದ್ದರೂ, ಅವರಿಗೆ ಇನ್ನೂ ಮೀಸಲಾತಿಯನ್ನು ಕಲ್ಪಿಸಿಲ್ಲ ಎಂದು ನ್ಯಾಯಮೂರ್ತಿ ರಾಜಶೇಖರ್ ಮಂಥಾ ಅವರು ತಿಳಿಸಿದ್ದಾರೆ.* 2014 ಹಾಗೂ 2022ರಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಲೈಂಗಿಕ ಅಲ್ಪಸಂಖ್ಯಾತರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಈ ಸೂಚನೆ ನೀಡಿದ್ದಾರೆ. * ಉದ್ಯೋಗಗಳಲ್ಲಿ ಸಮಾನ ಅವಕಾಶಕ್ಕೆ ಅರ್ಹರು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಮಾಜ ಕಲ್ಯಾಣ ಇಲಾಖೆಯು 2022ರ ನವೆಂಬರ್ ನಲ್ಲಿ ಅಧಿಸೂಚನೆ ಹೊರಡಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಯು ಹೈಕೋರ್ಟ್‌ಗೆ ವಿವರಿಸಿದ್ದರು.* ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ನೀಡುವಾಗ ಸರ್ಕಾರಿ ಉದ್ಯೋಗಗಳಲ್ಲಿ ನೇಮಕಾತಿ ನಡೆಸುವಾಗ ಅವರಿಗೆ ಎಲ್ಲ ಬಗೆಯ ಮೀಸಲಾತಿ ನೀಡುವಂತೆ ಸೂಚಿಸಿತ್ತು ಎಂದು ನ್ಯಾಯಮೂರ್ತಿ ರಾಜಶೇಖರ್ ಮಂಥಾ ಅವರು ಉಲ್ಲೇಖಿಸಿದ್ದಾರೆ.