* ನೈಋತ್ಯ ಬಂಗಾಳ ಕೊಲ್ಲಿಯ ಭಾಗದಲ್ಲಿ ತೀವ್ರ ವಾಯು ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ‘ಫೆಂಗಲ್’ ಚಂಡಮಾರುತವಾಗಿ ತೀವ್ರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟಿಸಿದೆ.* ಈ ಚಂಡಮಾರುತವು ನವೆಂಬರ್ 30ರಂದು ಪುದುಚೇರಿ ಬಳಿ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 90 ಕಿ.ಮೀ. ಇರಲಿದೆ.* ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಿಗೆ IMD ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ ಮತ್ತು ಕಡಲೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.* ತಮಿಳುನಾಡಿನ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರ್, ಅರಿಯಲೂರ್, ತಂಜಾವೂರು, ತಿರುವರೂರ್, ಮೈಲಾಡುತುರೈ, ನಾಗಪಟ್ಟಿಣಂ ಹಾಗೂ ಕಾರೈಕಲ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಿವಾಸಿಗಳು ಜಾಗರೂಕರಾಗಿರಲು ಮತ್ತು ಸುರಕ್ಷತಾ ಸಲಹೆಗಳನ್ನು ಅನುಸರಿಸಲು ಅಧಿಕಾರಿಗಳು ಸೂಚಿಸಿದ್ದಾರೆ.* ಸದ್ಯಕ್ಕೆ ತಿರುವರೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳ ಆರು ಪರಿಹಾರ ಕೇಂದ್ರಗಳಲ್ಲಿ 164 ಕುಟುಂಬಗಳಿಗೆ ಸೇರಿದ ಒಟ್ಟು 471 ಮಂದಿಗೆ ವಸತಿ ಕಲ್ಪಿಸಲಾಗಿದೆ.* ನಾಗಪಟ್ಟಿಣಂ, ಮೈಲಾಡುತುರೈ, ತಿರುವರೂರ್, ಕಡಲೂರು, ತಂಜಾವೂರು, ಚೆಂಗೆಲ್ಪೇಟ್ ಮತ್ತು ಚೆನ್ನೈ ಸೇರಿದಂತೆ ಅಗತ್ಯವಿರುವ ಕಡೆ NDRF ಮತ್ತು ರಾಜ್ಯ ತಂಡಗಳನ್ನು ನಿಯೋಜಿಸಲಾಗಿದೆ.* ಏತನ್ಮಧ್ಯೆ, ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರದಿಂದ 4,153 ದೋಣಿಗಳು ದಡಕ್ಕೆ ಮರಳಿವೆ. 2,229 ಪರಿಹಾರ ಶಿಬಿರಗಳು ಬಳಕೆಗೆ ಸಿದ್ಧವಾಗಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.