* ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. * ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (International Airport) ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ಅವರ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೆಪ್ಟೆಂಬರ್ 23 ರಂದು (ಸೋಮವಾರ) ಅನುಮೋದಿಸಿದೆ. * ಪುಣೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 'ಜಗದ್ಗುರು ಸಂತಶ್ರೇಷ್ಠ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 24 ರಂದು ಮೊದಲ ಹೆಜ್ಜೆ ಇಡಲಾಗಿದೆ ಎಂದು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ತಿಳಿಸಿದ್ದಾರೆ.* ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಶಿಫಾರಸು ಮಾಡಿದ್ದರು.