* ಪುಟ್ಟ ಮಕ್ಕಳ ನೆಚ್ಚಿನ ತಿನಿಸು ಬಾಂಬೆ ಮಿಠಾಯಿ ಎಂತಲೇ ಚಿರಪರಿಚಿತವಾಗಿರುವ ಕಾಟನ್‌ ಕ್ಯಾಂಡಿ ಮಾರಾಟ ನಿಷೇಧಿಸಿ ಪುದುಚೇರಿ ಸರಕಾರ ಆದೇಶ ಹೊರಡಿಸಿದೆ.* ಅದರಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ.* ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿದ್ದಾರೆ.*Rhodamine-B ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವರದಿಯಾಗಿದೆ.