* ಕರ್ನಾಟಕ ಮೂಲದ ಪವನ್ ಕುಮಾರ್ ಭೀಮಪ್ಪ ಭಜಂತ್ರಿ ಅವರು ಭಾನುವಾರ(ಸೆಪ್ಟೆಂಬರ್ 21) ಪಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.* ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಅವರು ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಿದರು. ಅವರು 2025ರ ಅಕ್ಟೋಬರ್ 22ರಂದು ನಿವೃತ್ತಿ ಹೊಂದುತ್ತಾರೆ.* ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಕೊಲಿಜಿಯಂ ಸಮಿತಿಯ ಶಿಫಾರಸಿನ ಮೇರೆಗೆ ಭಜಂತ್ರಿ ಅವರ ನೇಮಕ ನಡೆದಿದೆ.* 1963ರ ಅಕ್ಟೋಬರ್ 23ರಂದು ಜನಿಸಿದ ಭಜಂತ್ರಿ ಅವರು ಬೆಂಗಳೂರಿನ ಎಸ್ಜೆಆರ್ಸಿ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. 1990ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿ, 2015ರಲ್ಲಿ ಕರ್ನಾಟಕ ಹೈಕೋರ್ಟ್ನ ಹಂಗಾಮಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು.* ನಂತರ ಪಂಜಾಬ್-ಹರಿಯಾಣ ಹೈಕೋರ್ಟ್ಗೆ ವರ್ಗಾವಣೆಗೊಂಡು, 2021ರಲ್ಲಿ ಪಟ್ನಾ ಹೈಕೋರ್ಟ್ಗೆ ಸ್ಥಳಾಂತರಗೊಂಡಿದ್ದರು.