* 2024ರ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ಪ್ಯಾರಾ ಓಟಗಾರ್ತಿ ಪ್ರೀತಿ ಪಾಲ್‌ ಅವರು ಕಂಚಿನ ಪದಕವನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಪ್ಯಾರಾಲಿಂಪಿಕ್ಸ್‌ ಇತಿಹಾಸದಲ್ಲಿ ಟ್ರ್ಯಾಕ್‌ ಈವೆಂಟ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಪ್ಯಾರಾ ಆಥ್ಲೀಟ್‌ ಎಂಬ ದಾಖಲೆಯನ್ನು ಬರೆದಿದ್ದಾರೆ.*  ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಮಹಿಳೆಯರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ 14.21 ಸೆಕೆಂಡ್‌ಗಳಲ್ಲಿ ಪ್ರೀತಿ ಅವರು ಭಾರತಕ್ಕೆ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. * 17ನೇ ಆವೃತ್ತಿಯ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ. ಚೀನಾದ ಝೌ ಕ್ಸಿಯಾ (13.58) ಮತ್ತು ಗುವೊ ಕಿಯಾನ್ಕಿಯಾನ್ (13.74) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಗೆದ್ದುಕೊಂಡರು.* 2024 ರ ಮೇ ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರೀತಿ ಪಾಲ್‌ ಅವರು ಮಹಿಳೆಯರ 200 ಮೀಟರ್ ಟಿ35 ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈಗ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ 200 ಮೀಟರ್ ಸ್ಪರ್ಧೆಯಲ್ಲಿಯೂ ಸ್ಪರ್ಧಿಸಲಿದ್ದಾರೆ.* ಇದೆ 2024ರ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನೀಶ್ ನರ್ವಾಲ್ ಅವರು ಬೆಳ್ಳಿ ಪದಕ ಗೆದ್ದು ಸಾಧನೆ ಮಾಡಿದ್ದಾರೆ.