* ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ 'ಗಡಿನಾಡ ಚೇತನ ರಾಜ್ಯ ಪ್ರಶಸ್ತಿ'ಗೆ ಕೇರಳದ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಅವರನ್ನು ಸೇರಿ ಮೂವರು ಆಯ್ಕೆಯಾಗಿದ್ದಾರೆ.* ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳಲ್ಲಿನ ಸಂಘ- ಸಂಸ್ಥೆಗಳು, ಮಹನೀಯರಿಗೆ  'ಗಡಿನಾಡ ಚೇತನ' ಪ್ರಶಸ್ತಿಯನ್ನು ನೀಡಲಾಗುತ್ತದೆ.* ಮಾರ್ಚ್‌ 1ರಂದು ನಡೆದ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ “ಗಡಿನಾಡ ಚೇತನ” ರಾಜ್ಯ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. * ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರು ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ರಾಧಾಕೃಷ್ಣ, 'ಜಯದೇವಿತಾಯಿ ಲಿಗಾಡೆ' ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗೆ ಬೀದರ್‌ನ ಕನ್ನಡ ಪರ ಹೋರಾಟಗಾರ ಪಂಚಾಕ್ಷರಿ ಪುಣ್ಯಶೆಟ್ಟಿ ಹಾಗೂ 'ಕಯ್ಯಾರ ಕಿಞ್ಞಣ್ಣ ರೈ' ಅವರ ಹೆಸರಿನಲ್ಲಿ ಸ್ಥಾಪಿಸಲಾದ ಪ್ರಶಸ್ತಿಗೆ ಬೆಳಗಾವಿಯ ಕನ್ನಡ ಪರ ಚಿಂತಕ ಬಿ.ಎಸ್. ಗವಿಮಠ ಅವರು ಆಯ್ಕೆಯಾಗಿದ್ದಾರೆ.* ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯ ಸಮಿತಿ ಈ ಆಯ್ಕೆ ಮಾಡಿದೆ. ಈ ಪ್ರಶಸ್ತಿಯು ತಲಾ ₹1 ಲಕ್ಷ ನಗದು ಒಳಗೊಂಡಿದ್ದು, ಆಯ್ಕೆ ಸಮಿತಿಯು ಪ್ರಶಸ್ತಿ ಮೊತ್ತವನ್ನು 3 ಲಕ್ಷಕ್ಕೆ ಹೆಚ್ಚಿಸಲು ಪ್ರಾಧಿಕಾರಕ್ಕೆ ಸಲಹೆ ನೀಡಿದೆ ಎಂದು ತಿಳಿಸಿದೆ.