* ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 'ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್' ಕಾರ್ಯಕ್ರಮವನ್ನು ಜಾರಿಗೊಳಿಸಿದೆ.* 'ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಹಿಂದಿನ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಉತ್ಸಾಹಿ ಹಾಗೂ ಪ್ರತಿಭಾವಂತ ಯುವ ಸಮುದಾಯಕ್ಕೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ' ಎಂದು ಹೇಳಿದ್ದಾರೆ.* ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕ, ಆರ್ಥಿಕ, ಹಾಗೂ ಆಡಳಿತಾತ್ಮಕ ಅಂಶಗಳನ್ನು ಅಧ್ಯಯನ ಮಾಡಿ ಜಿಲ್ಲಾಡಳಿತದೊಂದಿಗೆ ಕಾರ್ಯನಿರ್ವಹಿಸಲು ಫೆಲೋಗಳಿಗೆ ಅವಕಾಶ. 44 ಫೆಲೋಗಳು ಈಗಾಗಲೇ ತರಬೇತಿ ಪಡೆದಿದ್ದಾರೆ.* ಫೆಲೋಗಳು ತ್ವರಿತ ಮತ್ತು ಉತ್ಸಾಹದಿಂದ ಕೆಲಸ ಮಾಡಿ, ಸರ್ಕಾರದ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಲು ಮಹತ್ವದ ಪಾತ್ರವಹಿಸಿದ್ದಾರೆ ಎಂದು ಖರ್ಗೆ ಅಭಿಪ್ರಾಯಪಟ್ಟರು.* ಫೆಲೋಗಳು 39 ಅರಿವು ಕೇಂದ್ರಗಳನ್ನು ಪುನರಾರಂಭಿಸಿ, 56 ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿದರೂ, 116 ಕೂಸಿನ ಮನೆಗಳನ್ನು ಪುನರಾರಂಭಿಸಿದ್ದಾರೆ. 66 ಕೂಸಿನ ಮನೆಗಳಿಗೆ ಮೂಲಭೂತ ಸೌಕರ್ಯಗಳೂ ಒದಗಿಸಿದ್ದಾರೆ.