* ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಸಂಗನೇರ್ ವಿಧಾನಸಭಾ ಕ್ಷೇತ್ರದ ಶಾಸಕ ಭಜನ್ ಲಾಲ್ ಶರ್ಮಾ ಅವರು ಆಯ್ಕೆಯಾಗಿದ್ದಾರೆ. ಬ್ರಾಹ್ಮಣ ಸಮುದಾಯದ ಭಜನ್‌ ಲಾಲ್‌ ಶರ್ಮಾ ಅವರು ಭರತ್‌ಪುರ ಮೂಲದವರಾಗಿದ್ದಾರೆ. * ರಾಜಸ್ಥಾನದ ನೂತನ ಉಪಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಇಬ್ಬರು ಆಯ್ಕೆಯಾಗಿದ್ದಾರೆ. ಇನ್ನು ಸ್ಪೀಕರ್ ಆಗಿ ವಾಸುದೇವ ದೇವನಾನಿ ಅವರನ್ನು ಆಯ್ಕೆ ಮಾಡಲಾಗಿದೆ.   * ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ, ಎಲ್ಲಾ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆಯಿತು. ಅದರ ಫಲಿತಾಂಶಗಳು ಡಿಸೆಂಬರ್ 3 ರಂದು ಬಂದಿತ್ತು. ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜಕೀಯ ಕದನದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವ ಮೂಲಕ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌ಗೆ 69 ಸ್ಥಾನಗಳು ಮಾತ್ರ ಸಿಗಲಿವೆ. ಇದಲ್ಲದೇ 15 ಸ್ಥಾನಗಳು ಇತರರ ಪಾಲಾಗಿವೆ.