* ಹಿಮಾಚಲ ಪ್ರದೇಶ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ( Human Rights Commission )ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.* ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.* ನೂತನ ಅಧ್ಯಕ್ಷರು ಹಾಗೂ ಸದಸ್ಯರು ಐದು ವರ್ಷ ಅಥವಾ 70 ವರ್ಷ ವಯಸ್ಸಾಗುವವರೆಗೆ ಈ ಅಧಿಕಾರವಧಿಯನ್ನು ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.* ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನವರಾದ ಎಲ್ ನಾರಾಯಣಸ್ವಾಮಿ ಅವರು ನ್ಯಾಯಮೂರ್ತಿ ಲಿಂಗಪ್ಪ ನಾರಾಯಣಸ್ವಾಮಿ 1987ರಲ್ಲಿ ವಕೀಲ ವೃತ್ತಿ ಆರಂಭಿಸಿದರು. 2009ರಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. 10 ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿದ ಇವರು 2019ರ ಜ.17ರಿಂದ ಮೇ 9ರವರೆಗೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯಭಾರ ನಿರ್ವಹಿಸಿದರು. 2019ರ ಅ.6ರಂದು ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡು, 2021ರ ಜೂನ್‌ ತಿಂಗಳಲ್ಲಿ ನಿವೃತ್ತಿ ಹೊಂದಿದರು. ಈಗ ರಾಜ್ಯ ಸರ್ಕಾರ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.