* ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ, ಬೆಂಗಳೂರಿನ ಚಿಕ್ಕಬಾಣಾವರದ ಕನ್ನಡಿಗ ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮೇ 21 ರಂದು (ಬುಧವಾರ) ಆದೇಶ ಹೊರಡಿಸಿದೆ.* ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಳೆದ ಏಪ್ರಿಲ್ 30 ರಂದು ನಿವೃತ್ತಿಯಾಗಿದ್ದು, ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿತ್ತು.* ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಲಾಗಿದೆ.* ಪ್ರಸ್ತುತ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿರುವ 1992ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಠಾಕೂರ್ ಅವರು ಅಭ್ಯರ್ಥಿಯಾಗಿದ್ದರು ಮತ್ತು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದರು. * ಮುಂದಿನ ಆದೇಶದವರೆಗೆ ಅವರು ಬೆಂಗಳೂರಿನ ಅಪರಾಧ ತನಿಖಾ ಇಲಾಖೆ (ಸಿಐಡಿ), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಡಿಜಿಪಿಯಾಗಿ ಮುಂದುವರಿಯಲಿದ್ದಾರೆ.