Job Description: * ಸರ್ಕಾರವು ಮಾರ್ಚ್ 23 ರಂದು ವಿವಿಧ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು. ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತ ರಣೆ, ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಸಮುದಾಯ ಬಂಡವಾಳ ನಿಧಿ ವಿತರಣೆ, ಅಮೃತ ಸ್ವಾಭಿಮಾನಿ ಕುರಿ ಗಾಹಿ ಯೋಜನೆ ಹಾಗೂ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.* ವಿವೇಕಾನಂದ ಯುವಶಕ್ತಿ ಯೋಜನೆ: ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ 12 ಸಾವಿರ ಯುವ ಸಂಘಗಳನ್ನು ರಚಿಸಿ ಅವರಿಗೆ ತರಬೇತಿ, ಉತ್ಪಾದನೆ, ಮಾರುಕಟ್ಟೆ, ಬ್ಯಾಂಕ್ ಸಹಾಯ ನೀಡಿ ಸ್ವಯಂ ಉದ್ಯೋಗಿಗಳಾಗಳು ನೆರವು ನೀಡಲಾಗುತ್ತಿದೆ. * ಸ್ತ್ರೀ ಸಾಮರ್ಥ್ಯ ಯೋಜನೆ: ಮಹಿಳೆಯರ ಸಾಮರ್ಥ್ಯ ರಾಜ್ಯಕ್ಕೆ ಉಪಯೋಗ ಆಗಬೇಕು ಎಂದು ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿ ಗೊಳಿಸಲಾಗಿದೆ.* ವಿದ್ಯಾನಿಧಿ ಯೋಜನೆ: ಸುಮಾರು 15 ಸಾವಿರ ಆಟೋ ಚಾಲಕರ ಮಕ್ಕಳಿಗೆ ವಿದ್ಯಾ ನಿಧಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.