* ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ‘ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ’ಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.* ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.* ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.* ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್ಸೆಟಿ-ಆರ್ಸೆಟಿ ಸರಕಾರೇತರ ಬೆಂಬಲ ಸಂಸ್ಥೆಗಳ (ಟಿಎಸ್ಎ) ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡುವ ಮೂಲಕ 30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ಪ್ರಾರಂಭಿಸುವಂತೆ ಪ್ರೇರೆಪಿಸಲಾಗುವುದು .* ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿರುವುದರಿಂದ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇದೆ ಆದತಿಂದ ಈ ಯೋಜನೆಯನ್ನು ಪ್ರಾರಂಬಿಸಲಾಗಿತ್ತಿದೆ.* ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವ ಗ್ರಾಮೀಣ ಪ್ರದೇಶದ ಮಹಿಳೆಯರು 18 ವರ್ಷ ಮೇಲ್ಪಟ್ಟವರಾಗಿದ್ದು, 45ವರ್ಷ ಒಳಗಿನವರಾಗಿರಬೇಕು. ಕೋರ್ಸ್ ಅನಿಸಾರವಾಗಿ 1 ರಿಂದ 3 ತಿಂಗಳುಗಳ ಕಾಲ ತರಬೇತಿ ನೀಡಲಾಗುತ್ತದೆ.