* ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಬಳಕೆಯನ್ನು ನಿಷೇಧಿಸಿದ ನಂತರ, ಅಂಗಡಿ-ಮಳಿಗೆಗಳಲ್ಲಿ ಪಾನ್ ಮಸಾಲ, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳ ಪ್ರದರ್ಶನವನ್ನು ನಿಷೇಧಿಸುವ ಹೊಸ ಕಾನೂನು ರೂಪಿಸುವ ಚಿಂತನೆ ಆರೋಗ್ಯ ಇಲಾಖೆ ಮಾಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.* ಹುಕ್ಕಾ ಬಾರ್ ನಿಷೇಧ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ ದಂಡ ಹೆಚ್ಚಳ, 21 ವರ್ಷಕ್ಕಿಂತ ಕಡಿಮೆ ವಯಸ್ಸು ಹೊಂದಿದವರಿಗೆ ತಂಬಾಕು ಮಾರಾಟ ನಿಷೇಧ ಮುಂತಾದ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.* ವಿದ್ಯಾರ್ಥಿಗಳಿಗೆ ತಂಬಾಕು ಬಳಕೆಯ ಹಾನಿಯ ಕುರಿತು ಜಾಗೃತಿ ಮೂಡಿಸಲು ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ವಿದ್ಯಾರ್ಥಿ ಗುಂಪುಗಳ ಮೂಲಕ ಜಾಗೃತಿ ಹರಡುವ ಯೋಜನೆ ರೂಪಿಸಲಾಗುತ್ತಿದೆ.* ಪಾನಮಸಾಲಾ ಹಾಗೂ ತಂಬಾಕು ಉತ್ಪನ್ನಗಳ ಜಾಹಿರಾತುಗಳಲ್ಲಿ ಬಾಲಿವುಡ್ ನಟರ ಪಾಲ್ಗೊಳ್ಳುವಿಕೆಯಿಂದ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದಕ್ಕೆ ಸರ್ಕಾರ ಗಮನಹರಿಸಬೇಕೆಂದು ಸಚಿವರು ಅಭಿಪ್ರಾಯಪಟ್ಟರು.* ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಕರ್ನಾಟಕ ಉತ್ತಮ ಕಾರ್ಯನಿರ್ವಹಿಸಿದ್ದಕ್ಕಾಗಿ, ರಾಜ್ಯ ಆರೋಗ್ಯ ಇಲಾಖೆ ವಿಶ್ವ ಆರೋಗ್ಯ ಸಂಸ್ಥೆಯಿಂದ 'ಸೌತ್ ಈಸ್ಟ್ ಏಷ್ಯಾ ವಲಯ' ಪ್ರಶಸ್ತಿಗೆ ಭಾಜನವಾಗಿದೆ.* ಡಾ. ಯುಥಾರೋ ಸಟಾಯೋ ಹಾಗೂ ಡಾ. ಪ್ರತಿಮಾ ಮೂರ್ತಿ ಅವರು ಯುವಜನತೆ ತಂಬಾಕು ಚಟಕ್ಕೆ ಹೆಚ್ಚು ಬೀಳುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.