* ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ಅವರು ಹೊಸ ನೋಟಿಫಿಕೇಶನ್ ಹೊರಡಿಸಿದ್ದು, ರಾಜ್ಯದ ಎಲ್ಲಾ ಕೋರ್ಟ್ ಹಾಲ್ಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಕುವಂತೆ ಸೂಚನೆ ನೀಡಲಾಗಿದೆ.* ಈ ನಿರ್ಧಾರ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳ ಜೊತೆಗೆ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೂ ಅನ್ವಯಿಸುತ್ತದೆ.* ಸಾರ್ವಜನಿಕರು, ವಕೀಲರು ಮತ್ತು ವಿವಿಧ ಸಂಘಟನೆಗಳು ಈ ಕುರಿತು ಹತ್ತಾರು ಬಾರಿ ಮನವಿ ಮಾಡಿದ್ದರು. ರಾಜ್ಯ ಸರ್ಕಾರವೂ ಈ ಬಗ್ಗೆ ಹಲವಾರು ಬಾರಿ ಪತ್ರ ಬರೆದಿತ್ತು.* ಈ ಎಲ್ಲಾ ಮನವಿಗಳ ಪರಿಶೀಲನೆಯ ನಂತರ, 2025ರ ಏಪ್ರಿಲ್ 26ರಂದು ನಡೆದ ಹೈಕೋರ್ಟ್ ಎಲ್ಲಾ ನ್ಯಾಯಮೂರ್ತಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.