* ಪಿಎಂಶ್ರೀ ಯೋಜನೆಯ ಮೂಲಕ ಎನ್ಇಪಿ ಅಂಶಗಳ ಅನ್ವಯ ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ.* ಪಿಎಂಶ್ರೀ ಯೋಜನೆಗೆ ಆಯ್ಕೆಯಾಗಿರುವ ಶಾಲೆಗಳಿಗೆ ಸೌರಫಲಕಗಳು, ಎಲ್ಇಡಿ ದೀಪಗಳು, ಉದ್ಯಾನ, ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಮುಕ್ತ, ಜಲ ಸಂರಕ್ಷಣೆ, ಮಳೆ ನೀರು ಕೊಯ್ಲು ಸೌಲಭ್ಯ ದೊರೆಯಲಿದೆ.* ಕೇಂದ್ರ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಸರ್ಕಾರಿ ಶಾಲೆಗಳ ಮರು ಅಭಿವೃದ್ಧಿಗೆ ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಯೋಜನೆ ರೂಪಿಸಲಾಗಿದ್ದು, ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದರು.* ಈ ಯೋಜನೆಯಡಿ ಸರ್ಕಾರಿ ಶಾಲೆಗಳಿಂದ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅರ್ಜಿ ಪಡೆದು ವಿವಿಧ ಮಾನದಂಡಗಳ ಆಧಾರದ ಮೇಲೆ ದೇಶದಲ್ಲಿ 14,500 ಶಾಲೆಗಳನ್ನು 18,128 ಕೋಟಿ ರೂ ವೆಚ್ಚದಲ್ಲಿ ಮರು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ.* ಎನ್ ಇಪಿ-2020ರ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಕಳೆದ ಜು.29ರಂದು ಪಿಎಂಶ್ರೀ ಯೋಜನೆಗೆ ಕೇಂದ್ರದ ಪಾಲಿನ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. * ಪಿಎಂಶ್ರೀ ಯೋಜನೆಯಡಿ ಕರ್ನಾಟಕದ 129 ಶಾಲೆಗಳಿಗೆ ಮರು ಅಭಿವೃದ್ಧಿಯಲ್ಲಿ ಆವಿಷ್ಕಾರ ಆಧಾರಿತ, ಕಲಿಕಾ ಕೇಂದ್ರಿತ ಬೋಧನಾ ವಿಧಾನಕ್ಕೆ ಒತ್ತು ನೀಡಲಾಗುತ್ತದೆ.