* ರಾಜ್ಯದಲ್ಲೆಡೆ ಗರ್ಭಿಣಿಯರಲ್ಲಿ ರಕ್ತಹೀನತೆ, ಮಾನಸಿಕ ಆರೋಗ್ಯ ಸ್ಥಿತಿಗತಿ ಬಗ್ಗೆಯೂ ಸಮೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ಪ್ರತಿ ಕುಟುಂಬದ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ತಿಳಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.* ಜೂನ್ 1ರಿಂದಲೇ ಸಮೀಕ್ಷೆ ಆರಂಭಗೊಂಡಿದ್ದು, ರಾಜ್ಯಾದ್ಯಂತ ಆರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆಯನ್ನು (health and nutrition survey) ಸರ್ಕಾರ ನಡೆಸುತ್ತಿದ ಜೂನ್ 30ರವರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಯಡಿ ಆರೋಗ್ಯ ಇಲಾಖೆ (Health Ministry) ಈ ಸಮೀಕ್ಷೆಯನ್ನು ಹಮ್ಮಿಕೊಂಡಿದೆ.* ಪ್ರಾಯೋಗಿಕವಾಗಿ ಮಂಡ್ಯ ಜಿಲ್ಲೆಯ ಶ್ರೀ ರಂಗಪಟ್ಟಣದಲ್ಲಿ ಅರೋಗ್ಯ ಮತ್ತು ಪೌಷ್ಟಿಕ ಸಮೀಕ್ಷೆ ಆರಂಭವಾಗಿದೆ ಎಂದು ಈಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.