Job Description: * ಕರ್ನಾಟಕದ ಹೈಕೋರ್ಟ್‌ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ.* ಹೈಕೋರ್ಟ್‌ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಮಾರ್ಚ್ 10 ಶುಕ್ರವಾರ ದಿನದಂದು ಈ ಆದೇಶ ಹೊರಡಿಸಿದೆ. ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್‌ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. * 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.* ಆದೇಶ ಈ ವರ್ಷಕ್ಕೆ ಮಾತ್ರ ಅನ್ವಯ ಈ ವರ್ಷ ಮಾತ್ರ ಬೋರ್ಡ್ ಎಕ್ಸಾಂ ರದ್ದುಪಡಿಸಲಾಗಿದೆ, ಮುಂದಿನ ವರ್ಷ ಎಲ್ಲಾ ನಿಯಮಗಳನ್ನ ಪಾಲಿಸಿ, ಪೋಷಕರ ಅಭಿಪ್ರಾಯವನ್ನು ಪಡೆದು, ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮವಾಗಿ ನಿರ್ಧರಿಸಿ ಎಂದು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.