* ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಮಾದಕ ವಸ್ತು ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಚಿಂತನೆಯನ್ನು ನಡೆಸಲಾಗಿದೆ.* ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್‌ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.* ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜ್ಯ ಕೋಶ, ಆರೋಗ್ಯಶಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಭಾಗಿತ್ವದಲ್ಲಿ ಅಕ್ಟೋಬರ್ 15 ರಂದು ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ಅವರು ಈ ಕುರಿತು ಮಾತನಾಡಿದರು.* ಯುವಜನರು ಮಾದಕವಸ್ತುಗಳ ವ್ಯಸನಕ್ಕೆ ಬಲಿಯಾಗದಂತೆ ದಂಧೆಯನ್ನು ಸಂಪೂರ್ಣ ನಿಗ್ರಹಿಸುವುದೇ ಸರ್ಕಾರದ ಗುರಿ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಬೇಕು.* ಆರೋಗ್ಯಕ್ಕೆ ಮಾರಕವಾದ, ಜೀವಕ್ಕೆ ಕುತ್ತು ತರುವ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂದು ಯುವಜನತೆ ಪ್ರತಿಜ್ಞೆ ಮಾಡಬೇಕು. ಮಾಡಿದ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.* ವಿಶ್ವ ಆರೋಗ್ಯ ಸಂಸ್ಥೆಯ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ. ತಂಬಾಕು ಸೇವಿಸುವ ಶೇ 50ರಷ್ಟು ಜನರಲ್ಲಿ ಕ್ಯಾನ್ಸ‌ರ್ ಕಾಣಿಸಿಕೊಳ್ಳುತ್ತಿದೆ ಎಂದರು.