* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು 6:1ರ ಅನುಪಾತದಡಿ ಸುಪ್ರೀಂ ಕೋರ್ಟ್ ಗುರುವಾರ (ಜುಲೈ 1) ಮಹತ್ವದ ತೀರ್ಪು ನೀಡಿದೆ.* ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಬಿ,ಆರ್.ಗವಾಯಿ, ಬೇಲಾ ಎಂತ್ರಿವೇದಿ, ಪಂಕಜ್ ಮಿತ್ತಲ್, ಮನೋಜ ಮಿಶ್ರಾ ಮತ್ತು ಸತೀಶ ಚಂದ್ರ ಶರ್ಮಾ ನೇತೃತ್ವದ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠ, SC, ST ಒಳ ಮೀಸಲಾತಿಗೆ ಒಪ್ಪಿಗೆ ನೀಡಿದೆ. * ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿಯೇ ಒಳ ಮೀಸಲಾತಿ ನೀಡಬಹುದು ಮತ್ತು ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಈ ಮೀಸಲಾತಿ ಜಾರಿಗೆ ತರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.* ಏಳು ನ್ಯಾಯಮೂರ್ತಿಗಳಲ್ಲಿ ಆರು ನ್ಯಾಯಮೂರ್ತಿಗಳು ಒಳಮೀಸಲಾತಿಯ ಪರವಾಗಿ ತೀರ್ಪು ನೀಡಿದ್ದು, ಒಬ್ಬರು ಮಾತ್ರ(ನ್ಯಾ. ಬೇಲಾ ತ್ರಿವೇದಿ) ಒಳ ಮೀಸಲಾತಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಹಾಗಾಗಿ 6:1 ರ ಅನುಪಾತದಡಿ, ಉಪವರ್ಗೀಕರಣ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.* ಮೀಸಲಾತಿ ವರ್ಗದ ಸಮುದಾಯಗಳ ಒಳ ಮೀಸಲಾತಿ ಒಳಗೊಂಡಿರುವ ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ(ಸೇವೆಗಳಲ್ಲಿ ಮೀಸಲಾತಿ) ಕಾಯಿದೆ, 2006 ರ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.* ಪ್ರಮುಖ ಅಂಶಗಳು : - ತಮ್ಮ ಇಚ್ಛೆಯಂತೆ ರಾಜ್ಯ ಸರಕಾರಗಳು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದ ನ್ಯಾಯಾಲಯ- ಹಿಂದುಳಿದ ಸಮುದಾಯಗಳಿಗೆ ಮೀಸಲು ನೀಸಲು ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಬಹುದುದು- ಉಪ ವರ್ಗೀಕರಣವು ರಾಜ್ಯಗಳಿಂದ ಪ್ರಮಾಣೀಕರಿಸಬಹುದಾದ ದತ್ತಾಂಶಗಳ ಮೂಲಕ ಸಮರ್ಥಿಸಿಕೊಳ್ಳುವಂತಿರಬೇಕು.