* ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.  'ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಖುಷಿ ವಿಚಾರ ಎಂದು ಶ್ಲಾಘಿಸಿದರು.* ರಾಜ್ಯಸಭೆಯಲ್ಲಿ ಅವರ ಸ್ಪೂರ್ತಿದಾಯಕ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲ ಪುರಾವೆಯಾಗಿದೆ. ಇದು ನಮ್ಮ ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಹೇಳಿದರು. ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಜಿ ಅವರು ಶುಭ ಹಾರೈಸಿದ್ದಾರೆ.* 1996 ರಲ್ಲಿ, ಸುಧಾ ಮೂರ್ತಿ ಅವರು ಇನ್ಫೋಸಿಸ್ ಫೌಂಡೇಶನ್ ಅನ್ನು ಪ್ರಾರಂಭಿಸಿದರು. ಇಲ್ಲಿಯವರೆಗೆ ಇನ್ಫೋಸಿಸ್ ಫೌಂಡೇಶನ್‌ನ ಟ್ರಸ್ಟಿ, ಬೆಂಗಳೂರು ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿಯು ಸಹ ಕಾರ್ಯ ನಿರ್ವಹಿಸಿದರು. 2006 ರಲ್ಲಿ ಸುಧಾ ಮೂರ್ತಿ ಅವರಿಗೆ ಭಾರತ ಸರ್ಕಾರದಿಂದ ಸಾಮಾಜಿಕ ಕಾರ್ಯಗಳಿಗಾಗಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಂತರ 2023 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು.* ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.* ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.