* ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 'ಗೌರವ ದತ್ತಿ ಪ್ರಶಸ್ತಿಗೆ' ಜಾನಪದ ವಿದ್ವಾಂಸ ಮೈಸೂರಿನ ಹಿ. ಶಿ. ರಾಮಚಂದ್ರೇಗೌಡ ಮತ್ತು ವಿಮರ್ಶಕಿ ಬೆಂಗಳೂರಿನ ಸುಮಿತ್ರಾಬಾಯಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.* ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಅವರ ನೇತೃತ್ವದಲ್ಲಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 30 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.* ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್‌ ಅವರು ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. * ಹಿ.ಶಿ.ರಾಮಚಂದ್ರೇಗೌಡ ಅವರು ಕೇರಳದಲ್ಲಿ ಜಾನಪದದ ಕುರಿತು ಅಧ್ಯಯನ ಮಾಡಿದ್ದರು. ಅವರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. * ಬಿ.ಎನ್. ಸುಮಿತ್ರಾಬಾಯಿ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಾಸನದ ಎ.ವಿ.ಕಾಂತಮ್ಮ ಮತ್ತು ಬೆಂಗಳೂರಿನ ಎ.ಪಿ.ಎಸ್.ವಾಣಿಜ್ಯ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದಾರೆ.