Job Description: * ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕರ್ನಾಟಕದ ಮಿಥುನ್ ಮಂಜುನಾಥ್ ಅವರು ಪ್ರಶಸ್ತಿ ಜಯಿಸಿದ್ದಾರೆ. ಮಿಥುನ್ 21-16, 21-11ರಿಂದ ಮಧ್ಯಪ್ರದೇಶದ ಪ್ರಿಯಾಂಶು ರಾಜಾವತ್ ಅವರನ್ನು ಸೋಲಿಸಿದರು.* ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಅನುಪಮಾ ಉಪಾಧ್ಯಾಯ ಅವರು 20-22, 21-17, 24-22 ರಿಂದ ಆಕರ್ಷಿ ಕಶ್ಯಪ್ ಅವರನ್ನು ಸೋಲಿಸಿ ಪ್ರಶಸ್ತಿ ಗೆದ್ದರು. ಹಾಗೂ ಮಹಿಳಾ ಡಬಲ್ಸ್‌ನಲ್ಲಿ ಗಾಯತ್ರಿ ಗೋಪಿಚಂದ್ ತ್ರಿಶಾ ಜೋಲಿ 21-10, 21-9ರಿಂದ ಕಾವ್ಯಾ ಗುಪ್ತಾ - ದೀಪ್ಪಿಕಾ ಸಿಂಗ್ ವಿರುದ್ಧ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡರು.