* ಮಾಜಿ ಪ್ರಧಾನಿ ದಿವಗಂತ ಡಾ. ಮನಮೋಹನ್ ಸಿಂಗ್ ಅವರ ಸಮಾಧಿ ನಿರ್ಮಾಣಕ್ಕಾಗಿ ಯಮುನಾ ನದಿ ದಂಡೆಯಲ್ಲಿರುವ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಕೇಂದ್ರ ಸರ್ಕಾರ ಸ್ಥಳ ಗುರುತಿಸಿರುವುದಾಗಿ ಮೂಲಗಳು ತಿಳಿಸಿವೆ.* ಮಾಜಿ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಅವರ ಸಮಾಧಿ ಸ್ಥಳದ ಸಮೀಪವೇ ಸಿಂಗ್ ಅವರ ಸಮಾಧಿಗೂ ಕೇಂದ್ರ ಸರ್ಕಾರ ಸ್ಥಳ ಆಯ್ಕೆ ಮಾಡಿದೆ.* ರಾಷ್ಟ್ರೀಯ ಸ್ಮೃತಿ ಸ್ಥಳವು ಯಮುನಾ ನದಿ ದಂಡೆಯ ಉದ್ದಕ್ಕೂ ಇರುವ ಪ್ರದೇಶವಾಗಿದ್ದು, ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು ಮತ್ತು ಪ್ರಧಾನಮಂತ್ರಿಗಳ ಅಂತಿಮ ವಿಧಿಗಳು ಮತ್ತು ಸ್ಮಾರಕಗಳ ನಿರ್ಮಾಣಕ್ಕಾಗಿ ಮೀಸಲಿಡಲಾಗಿದೆ.* ಕೇಂದ್ರ ಸರ್ಕಾರ ಗುರುತಿಸಿದ ಜಾಗಕ್ಕೆ ಸಿಂಗ್ ಕುಟುಂಬಸ್ಥರು ಒಪ್ಪಿಗೆ ನೀಡಬೇಕು. ಸಿಂಗ್ ಕುಟುಂಬಸ್ಥರು ಟ್ರಸ್ಟ್ ರಚಿಸಿ, ನಂತರ ಆ ಟ್ರಸ್ಟ್ಗೆ ಸಮಾಧಿ ನಿರ್ಮಾಣಕ್ಕಾಗಿ ಭೂಮಿ ಹಸ್ತಾಂತರಿಸಲಾಗುತ್ತದೆ.* ವಸತಿ ಹಾಗೂ ನಗರ ವ್ಯವಹಾರಗಳ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಇತ್ತೀಚೆಗೆ ಸಿಂಗ್ ಕುಟುಂಬಸ್ಥರನ್ನು ಭೇಟಿಯಾಗಿ, ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ 1.5 ಎಕರೆ ಸ್ಥಳ ಗುರುತಿಸಿರುವುದಾಗಿ ಮಾಹಿತಿ ನೀಡಿದರು.