* ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಮತ್ತು ಹಾಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.* 2022ರ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬಿ. ದಯಾನಂದ್ ಪದಕಕ್ಕೆ ಆಯ್ಕೆಯಾಗಿದ್ದು, 2023ರ ಸಾಲಿನಲ್ಲಿ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಪದಕ ಲಭಿಸಿದೆ.* ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ನಂತರ ಕರ್ತವ್ಯಲೋಪ ಆರೋಪದಲ್ಲಿ ದಯಾನಂದ್ ಅಮಾನತುಗೊಂಡರು. ಅವರ ಸ್ಥಾನಕ್ಕೆ ನಂತರ ಸೀಮಂತ್ ಕುಮಾರ್ ಸಿಂಗ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ನೇಮಿಸಲಾಯಿತು.