* ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯವಾಗಿ ಮರು ನಾಮಕರಣಗೊಂಡಿದೆ. * ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ.* ರಾಯಚೂರು ವಿಶ್ವವಿದ್ಯಾಲಯವನ್ನು 2021 ರಲ್ಲಿ ಕರ್ನಾಟಕ ರಾಜ್ಯದ ಕಾಯಿದೆಯ ಮೂಲಕ ಸ್ಥಾಪಿಸಲಾಯಿತು. ಹಿಂದೆ ಇದು ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವಾಗಿತ್ತು. ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ಕಾಲೇಜುಗಳು ಮತ್ತು ಸ್ನಾತಕೋತ್ತರ ಕೇಂದ್ರಗಳು ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಸೇರಿವೆ. * ರಾಯಚೂರು ವಿಶ್ವವಿದ್ಯಾಲಯು ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 167 ರಲ್ಲಿದೆ. ಇದು ಪರ್ವತಗಳು ಮತ್ತು ಅರಣ್ಯದಿಂದ ಆವೃತವಾಗಿದೆ.* ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.