Job Description: * ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ "ರೈತ ಶಕ್ತಿ ಯೋಜನೆ' ಶೀಘ್ರವೇ ಚಾಲನೆ‌ ಸಿಗಲಿದೆ.* ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 - 23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಬರುವ ಸೆಪ್ಟೆಂಬರ್‌ನಲ್ಲಿ ” ರೈತ ಶಕ್ತಿ ಯೋಜನೆಗೆ” ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.* ಪ್ರತಿ ಎಕರೆಗೆ ರೂ 250 /– ಗಳಂತೆ ಗರಿಷ್ಠ ಐದು ಎಕರೆಗೆ 1250 /- ರೂ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡಲು "ರೈತ ಶಕ್ತಿ" ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು , ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ‌.ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.* ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು, ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ ( DBT ) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುವುದು . ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.