Job Description: * ನೀರಜ್ ನಿಗಮ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಏಪ್ರಿಲ್ 2 ರಂದು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಕ ಮಾಡಿದೆ. ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವರು ಗ್ರಾಹಕ ಶಿಕ್ಷಣ ಮತ್ತು ರಕ್ಷಣೆ ಸೇರಿದಂತೆ ನಾಲ್ಕು ಇಲಾಖೆಗಳನ್ನು ನೋಡಿಕೊಳ್ಳಲಿದ್ದಾರೆ.* ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುವದಕ್ಕಿಂತ ಮೊದಲು ಅವರು RBI ನ ಭೋಪಾಲ್ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿದ್ದರು.* ನೀರಜ್ ನಿಗಮ್ ರವರಿಗೆ ಮೂರು ದಶಕಗಳಿಗೂ ಹೆಚ್ಚು ಅವಧಿಯ ಅನುಭವ ಅವರಿಗಿದ್ದು ಈ ಹಿಂದೆ ನಿಯಂತ್ರಣ ಮತ್ತು ಮೇಲ್ವಿಚಾರ, ಮಾನವ ಸಂಪನ್ಮೂಲ ನಿರ್ವಹಣೆ, ಕರೆನ್ಸಿ ನಿರ್ವಹಣೆ, ಬ್ಯಾಂಕ್ ಖಾತೆಗಳು ಮತ್ತು ರಿಸರ್ವ್ ಬ್ಯಾಂಕ್‌ನಲ್ಲಿನ ಇತರ ಕ್ಷೇತ್ರಗಳಲ್ಲಿ RBI ಕೇಂದ್ರ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ.